ಯುವಜನ

ಹಠಾತ್ ಹೃದಯಾಘಾತದಿಂದ ಕಾಲೇಜು ವಿದ್ಯಾರ್ಥಿನಿ ಸಾವು

Views: 103

ಕನ್ನಡ ಕರಾವಳಿ ಸುದ್ದಿ: ಶೃಂಗೇರಿ ತಾಲ್ಲೂಕಿನ ವಿದ್ಯಾರ್ಥಿನಿಯೊಬ್ಬರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ.

ದಿಶಾ ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಹಾಸ್ಟೆಲ್‌ನಲ್ಲಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಅಕಾಲಿಕ ಸಾವಿನ ಸುದ್ದಿ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಕುಟುಂಬದವೆರಲ್ಲಿ ತೀವ್ರ ದುಃಖ ಮತ್ತು ಆಘಾತವನ್ನುಂಟುಮಾಡಿದೆ.

ಘಟನೆ ಸಂಬಂಧ ಶೃಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Related Articles

Back to top button