ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು: ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಕೊಡ್ಲಾಡಿ- ಬಾಂಡ್ಯದಲ್ಲಿ ವಿಶೇಷ ಶಿಬಿರ   

Views: 87

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಒಂದು ದಿನದ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ, ಬಾಂಡ್ಯ ಇಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಶಾರದ ಕಾಲೇಜು ಟ್ರಸ್ಟ್ ಇದರ ಟ್ರಸ್ಟಿಗಳಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಮಾತನಾಡಿ, ಸೇವಾ ಮನೋಭಾವನೆಯು ಮನಸ್ಸಿಗೆ ಸಂತೃಪ್ತಿ ನೀಡುವ ಒಂದು ಮಹಾ ಕಾರ್ಯ ವಿದ್ಯಾರ್ಥಿಗಳು ತಮ್ಮಿಂದಾದ ಸೇವೆಯನ್ನು ಈ ಸಮಾಜಕ್ಕೆ ನೀಡುವ ಮುಖಾಂತರ ಸಮಾಜಕ್ಕೆ ನಾವು ಏನಾದರೂ ಸೇವೆಯ ಮುಖಾಂತರ ನೀಡಿದರೆ ಸಂತೃಪ್ತ ಜೀವನ ನಮ್ಮದಾಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸೇವಾ ಮನೋಭಾವ ಮೂಡಿಸಿಕೊಳ್ಳಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಚೋನಾಳಿ, ಮುಖ್ಯೋಪಾಧ್ಯಾಯರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ, ಬಾಂಡ್ಯ ಇವರು ಮಾತನಾಡಿ ಸೇವೆಯ ಮುಖಾಂತರ ಈ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ಹಾಗೂ ಏನ್ ಎಸ್ ಎಸ್ ನಮಗೆ ಜೀವನ ಪಾಠ ಕಲಿಸುವ ವೇದಿಕೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ರತ್ನಾಕರ ಆಚಾರ್ಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಮಡಿವಾಳ ಉಪಸ್ಥಿತರಿದ್ದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ. ರವಿಚಂದ್ರ ಸ್ವಾಗತಿಸಿ ಪ್ರಾಸ್ತಾವಿಸಿದರು. ಸಹ ಯೋಜನಾಧಿಕಾರಿ ಕುಮಾರಿ ಮನವಿ ಕೆ ಕೆ ವಂದಿಸಿ ವಿದ್ಯಾರ್ಥಿನಿ ಚೈತನ್ಯ ಪ್ರಥಮ ಬಿಸಿಎ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಶ್ರಮದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Articles

Back to top button