ಅಯ್ಯಪ್ಪಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ಪ್ರಾಂಶುಪಾಲರಿಂದ ಥಳಿತ !
Views: 91
ಕನ್ನಡ ಕರಾವಳಿ ಸುದ್ದಿ: ಚಿಕ್ಕಮಗಳೂರಿನ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಶಾಲಾ ಆಡಳಿತ ಮಂಡಳಿಯ ನಡೆಯೊಂದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನಗರದ ಸೆಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿ ಬಂದ 7ನೇ ತರಗತಿಯ ಬಾಲಕನಿಗೆ ಶಾಲಾ ಪ್ರಿನ್ಸಿಪಾಲ್ ಹೊಡೆದಿದ್ದಾರೆ ಎಂದು ಆರೋಪಿಸಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ವಿದ್ಯಾರ್ಥಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಾಲೆಗೆ ಬಂದಿದ್ದು, ಇದನ್ನು ಕಂಡ ಶಾಲೆ ಪ್ರಾಂಶುಪಾಲರು ಯಾರನ್ನು ಕೇಳಿ ಮಾಲೆ ಧರಿಸಿದ್ದೀಯಾ ಎಂದು ಪ್ರಶ್ನಿಸಿ ವಿದ್ಯಾರ್ಥಿಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಶರ್ಟ್ ಒಳಗೆ ಬನಿಯನ್ ಯಾಕೆ ಹಾಕಿಲ್ಲ ಎಂದು ವಿಚಾರಿಸಿ ಶಬರಿಮಲೆ ಯಾತ್ರೆಗೆ ಹೋಗಲು ರಜೆ ನೀಡುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಮತ್ತು ಮಾಲಾಧಾರಿಗಳು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಜಾಬ್ ವಿಷಯದಲ್ಲಿ ಕಾನೂನು ಹೇಗಿದೆಯೋ ಇಲ್ಲಿಯೂ ಹಾಗೆಯೇ ವರ್ತಿಸಿ. ಇಲ್ಲದಿದ್ದರೆ ನಿಮ್ಮ ಸಂಸ್ಥೆ ವಿರುದ್ದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಶಾಲೆಯ ಪ್ರಾಂಶುಪಾಲರು, ಪ್ರತಿಭಟನಕಾರರ ಮುಂದೆ ಬಂದು ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ.






