ರಾಜಕೀಯ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿಗೆ 17 ವರ್ಷಗಳ ಜೈಲು
Views: 28
ಕನ್ನಡ ಕರಾವಳಿ ಸುದ್ದಿ: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಮಾಜಿ ಪತ್ನಿ ಬುಶ್ರಾ ಬೀಬಿಗೆ ಪಾಕಿಸ್ತಾನದ ನ್ಯಾಯಾಲಯ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ.
ಈ ಪ್ರಕರಣವು 2021ರಲ್ಲಿ ಸೌದಿ ಸರಕಾರದಿಂದ ಮಾಜಿ ದಂಪತಿ ಪಡೆದ ಉಡುಗೊರೆಗಳಲ್ಲಿನ ವಂಚನೆಯ ಕುರಿತಾಗಿದೆ. ಇಮ್ರಾನ್ ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ವಿಧಿಗಳಡಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಅವರೆಲ್ಲರಿಗೂ ತಲಾ 16.4 ಮಿಲಿಯನ್ ದಂಡವನ್ನೂ ವಿಧಿಸಿದೆ.






