ಕರಾವಳಿ

ಬ್ರಹ್ಮಾವರ: ಪ್ರವೀಣ್ ಪೂಜಾರಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಹೆಗ್ಡೆ ವಿರುದ್ಧ ಸುಮೊಟೋ ಪ್ರಕರಣ ದಾಖಲು

Views: 198

ಕನ್ನಡ ಕರಾವಳಿ ಸುದ್ದಿ: ವಾರೆಂಟ್ ಜಾರಿಗೊಳಿಸಲು ಮನೆಗೆ ತೆರಳಿದ  ಪೋಲಿಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಠಾಣೆಯ ಮುಂಭಾಗ ನಡೆದ ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಲ್ಲವ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಪೂಜಾರಿ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್‌ ಹೆಗ್ಡೆ ಸೇರಿದಂತೆ ಇತರರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.

ಪ್ರತಿಭಟನೆಯಲ್ಲಿ ಬಳಸಿದ್ದ ಧ್ವನಿವರ್ಧಕಕ್ಕೆ ಯಾವುದೇ ರೀತಿಯ ಅನುಮತಿಯನ್ನು ಪಡೆಯದೇ ಕಾನೂನು ಉಲ್ಲಂಘಿಸಲಾಗಿದೆ ಎಂದು ಬ್ರಹ್ಮಾವರ ಪಿಎಸ್‌ಐ ಅಶೋಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related Articles

Back to top button