ಶಿಕ್ಷಣ

ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ 

Views: 224

ಕನ್ನಡ ಕರಾವಳಿ ಸುದ್ದಿ:  ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಡಿ.24ರಂದು  ಹಮ್ಮಿಕೊಳ್ಳಲಾಗಿತ್ತು.

2025-26ನೇ ಸಾಲಿನ ವಾರ್ಷಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಶಸ್ತಿ ವಿತರಣಾ ಸಮಾರಂಭವನ್ನು ಮಣಿಪಾಲದ ಎಂ.ಐ.ಟಿ.ಯ ಗಣಿತಶಾಸ್ತ್ರ ಸಹಾಯಕ ಪ್ರಾಧ್ಯಾಪಕರು, ನೇಶನಲ್ ಟ್ರೈನರ್ ಡಾ.ಹರಿಣಾಕ್ಷಿ ಕರ್ಕೇರ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಜೀವನವು ಮೌಲ್ಯಯುತವಾದ ವಿಚಾರಗಳನ್ನು ಒಳಗೊಂಡಿರಬೇಕು. ತಂತ್ರಜ್ಞಾನವು ನಮ್ಮನ್ನು ಆಳದಂತೆ ಎಚ್ಚರಿಕೆ ವಹಿಸಬೇಕು. ತಂತ್ರಜ್ಞಾನದೊಂದಿಗೆ ಜೊತೆಯಾಗಿ ಹೆಜ್ಜೆ ಹಾಕಿದರೂ ನಮ್ಮ ಮೂಲ ಸಂಸ್ಕೃತಿಯ ಬೇರನ್ನು ಮರೆಯಬಾರದು. ಕಲಿಕೆಯ ಜೊತೆಗೆ ಸಾಂಸ್ಕೃತಿಕ ವಿಚಾರಗಳನ್ನು ಒಪ್ಪಿಕೊಂಡು ಪಾಲಿಸಬೇಕು ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್  ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್.ಶೆಟ್ಟೆಯವರು ಮಾತನಾಡಿ, ಸಾಧನೆಯ ಪಥದಲ್ಲಿ ಸೋಲು ಗೆಲುವು ಸರ್ವೇಸಾಮಾನ್ಯ. ಸೋಲು ಗೆಲುವಿನ ಸೋಪಾನವಾಗಿ ನಮ್ಮ ಬದುಕನ್ನು ರೂಪಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಸಂಸ್ಥಾಪಕರಾದ ಶ್ರೀ ಬಿ. ಅಪ್ಪಣ್ಣ ಹೆಗ್ಡೆಯವರ 91ನೇ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲರಾದ ಡಾ. ರೂಪಾಶಣೈ ರವರು ಪ್ರಶಸ್ತಿ ವಿಜೇತರಿಗೆ ಶುಭ ಕೋರಿದರು. ಶಿಕ್ಷರಾದ ಶ್ರೀ ವಿಷ್ಣುತಾಂಡೇಲ್ ಕಾರ್ಯಕ್ರಮ ನಿರೂಪಿಸಿದ್ದು, ಶ್ರೀ ವೆಂಕಟಕೃಷ್ಣ ಅತಿಥಿಗಳನ್ನು ಪರಿಚಯಿಸಿದ್ದು, ಶ್ರೀಮತಿ ಪ್ರತಿಮಾ ಸ್ವಾಗತಿಸಿ, ಶ್ರೀಮತಿ ಶ್ವೇತಾ ವಂದಿಸಿದರು.

Related Articles

Back to top button