ಇತರೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 2 ವರ್ಷದ ಮಗುವನ್ನೇ ಮಾರಿದ ತಾಯಿ!

Views: 119

ಕನ್ನಡ ಕರಾವಳಿ ಸುದ್ದಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತಾಯಿಯೊಬ್ಬಳು ತನ್ನ ಎರಡು ವರ್ಷದ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ.

ಕೆಲದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲ ಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ.

ಡಿ.23ರಂದು ಹುಳಿಯಾರು ರಸ್ತೆಯ ನಿವಾಸಿ ಐಶ್ವರ್ಯ ವಿರುದ್ಧ ಹಿರಿಯೂರು ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೂವಿನ ಹೊಳೆ ಗ್ರಾಮದ ಚಂದ್ರಪ್ಪ ಜತೆ ಐಶ್ವರ್ಯ ಅಕ್ರಮ ಸಂಬಂಧ ಹೊಂದಿದ್ದಳು. ಅಕ್ರಮ ಸಂಬಂಧಕ್ಕೆ ಮಗು ಅಡ್ಡಿಯಾಗುತ್ತದೆ ಎಂದು ಕೊಪ್ಪಳ ಮೂಲದವರಿಗೆ ಮಗುವನ್ನು 50,000 ರು.ಗೆ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!