ಲಾರಿ- ಖಾಸಗಿ ಬಸ್ ಡಿಕ್ಕಿ: ಬಸ್ ಹೊತ್ತಿ ಉರಿದು 10 ಮಂದಿ ಸಜೀವ ದಹನ
Views: 104
ಕನ್ನಡ ಕರಾವಳಿ ಸುದ್ದಿ: ಖಾಸಗಿ ಟ್ರಾವೆಲ್ ಬಸ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಹಿರಿಯೂರಿನ ಜವನಗೊಂಡನಹಳ್ಳಿಯ ಗೊರ್ಲತ್ತು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದವು. ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅದರಲ್ಲಿದ್ದ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್ ನಲ್ಲಿ 30 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಎದುರುಗಡೆಯಿಂದ ಲಾರಿ ಬಂದು ಬಸ್ಸಿಗೆ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. 12 ಜನ ಗಾಯಗಳುಗಳು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 9 ಜನ ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.






