ಇತರೆ
ನೇಮೋತ್ಸವದಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕದ್ದು ಪರಾರಿಯಾಗಿದ್ದ ಮೂವರು ಮಹಿಳೆಯರ ಬಂಧನ
Views: 60
ಕನ್ನಡ ಕರಾವಳಿ ಸುದ್ದಿ : ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿಯಲ್ಲಿ ನೇಮೋತ್ಸವದ ನಡೆಯುತ್ತಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕದ್ದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳೆಯರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳು ತಮಿಳುನಾಡಿನ ನಿವಾಸಿಗಳಾದ ಕಾಳಿಯಮ್ಮ, ಶೀಥಲ್ ಹಾಗೂ ಮಾರಿ ಎಂದು ಗುರುತಿಸಲಾಗಿದೆ.
ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕದಿಯುವ ದೃಶ್ಯ ಸಿಸಿ ಟಿವಿಯಲ್ಲಿ ಸರೆಯಾಗಿತ್ತು.ಆ ದೃಶ್ಯ ಎಲ್ಲಾ ಕಡೆ ವೈರಲ್ ಆಗುತ್ತಿದಂತೆ ಪಡುಬಿದ್ರಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.






