ಶಿಕ್ಷಣ
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರೀತಮ್ ಜಿ ಹಾಗೂ ರಿಷಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ
Views: 15
ಕನ್ನಡ ಕರಾವಳಿ ಸುದ್ದಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ವಿಭಾಗದಲ್ಲಿ, ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ ಇಲ್ಲಿನ ಹತ್ತನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರೀತಮ್ ಜಿ ಹಾಗೂ ರಿಷಿ ಶೆಟ್ಟಿ ಇವರು ಪ್ರಥಮ ಸ್ಥಾನ ಗಳಿಸಿ ಅಮೋಘ ಸಾಧನೆ ಮಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಕೀರ್ತಿ ಹೆಚ್ಚಿಸಿರುವ ಈ ಹೆಮ್ಮೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಶಾಲಾ ಮುಖ್ಯೋಪಾಧ್ಯಾಯಿನಿ, ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ ಹಾಗೂ ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.






