ಇತರೆ
ಹುಲಿಕಲ್ ಘಾಟಿಯಲ್ಲಿ ರಸ್ತೆ ಪಕ್ಕದ ಗುಡ್ಡಕ್ಕೆ ಗುದ್ದಿದ ಬಸ್: ಮಗು ಸಾವು, ಹಲವರ ಸ್ಥಿತಿ ಗಂಭೀರ
Views: 364
ಕನ್ನಡ ಕರಾವಳಿ ಸುದ್ದಿ: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ದುರ್ಗಾಂಬ ಬಸ್ ಹುಲಿಕಲ್ ಘಾಟಿಯಲ್ಲಿ ರಸ್ತೆ ಪಕ್ಕದ ಗುಡ್ಡಕ್ಕೆ ಗುದ್ದಿದ ಪರಿಣಾಮ ಮಗು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡವರಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.






