ಇತರೆ
ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ:ಮೂವರು ಸ್ಥಳದಲ್ಲೇ ಸಾವು
Views: 59
ಕನ್ನಡ ಕರಾವಳಿ ಸುದ್ದಿ: ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಡೂರುತಾಲೂಕಿನ ತಂಗ್ಲಿಗ್ರಾಮದ ನಿವಾಸಿಗಳಾದ ಶಬ್ಬಿರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.






