ಮೂರು ಹೆಣ್ಣಾಗಿದ್ದಕ್ಕೆ ಪತ್ನಿ, ಮಕ್ಕಳನ್ನು ಬಿಟ್ಟು ಮತ್ತೊಬ್ಬ ಯುವತಿಯ ಜೊತೆ ಸೇರಿದ ಗಂಡ!
Views: 79
ಕನ್ನಡ ಕರಾವಳಿ ಸುದ್ದಿ: ಮೂರೂ ಹೆಣ್ಣು ಮಕ್ಕಳು ಎಂದು ಗಂಡ ಪತ್ನಿಗೆ ಕೈಕೊಟ್ಟು ಪರಾರಿಯಾಗಿ ಮತ್ತೊಬ್ಬ ಯುವತಿಯ ಜೊತೆ ಸೇರಿದ ಪ್ರಕರಣ ಬೆಂಗಳೂರು ಈಶಾನ್ಯ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಆರೋಪಿ ಹರೀಶ್, ಪತ್ನಿಗೆ ಕೈಕೊಟ್ಟು ಪರಾರಿದ ವ್ಯಕ್ತಿ. ಹರೀಶ್ ಮೂಲತಃ ರಾಜಸ್ಥಾನದವನು. ಬೆಂಗಳೂರಿನಲ್ಲಿ ಸೇಲ್ಸ್ ಎಕಿಕ್ಯೂಟಿವ್ ಕೆಲಸ ಮಾಡುತ್ತಿದ್ದಾನೆ. ಈತ ವರಲಕ್ಷ್ಮಿ ಎಂಬ ಸ್ಟಾಫ್ ನರ್ಸ್‌ನ ಪ್ರೀತಿಸಿ ಮದುವೆ ಆಗಿದ್ದ. ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗಿದ್ದ. ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಈ ಜೋಡಿಗೆ ಹುಟ್ಟಿದ ಮೂವರು ಮಕ್ಕಳು ಕೂಡ ಹೆಣ್ಣು. ಇದು ಹರೀಶ್‌ನ ಆಸಮಾಧಾನಕ್ಕೆ ಕಾರಣವಾಗಿದೆ.
ಮೊದಲ ಇಬ್ಬರು ಮಕ್ಕಳು ಹೆಣ್ಣು ಎಂದು ಗೊತ್ತಾದಾಗ ಮೂರನೇಯ ಬಾರಿಗೆ ಗಂಡು ಹುಟ್ಟಬಹುದು ಎಂಬ ಆಸೆಯಲ್ಲಿದ್ದ. ಹರೀಶ್ ಪತ್ನಿ ವಿಜಯಲಕ್ಷ್ಮಿ, ಕಳೆದ ಒಂದೂವರೆ ತಿಂಗಳ ಹಿಂದೆ ಹಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಒಂದೂವರೆ ತಿಂಗಳ ಹಸಗೂಸು ಹಾಗೂ ಇಬ್ಬರು ಮಕ್ಕಳನ್ನು ಪತ್ನಿಯ ಮಡಿಲಿಗೆ ಹಾಕಿ ಪರಾರಿ ಆಗಿದ್ದಾನೆ. ಪತಿ ಕೈಕೊಟ್ಟ ಬೆನ್ನಲ್ಲೇ ಪತ್ನಿ ವರಲಕ್ಷ್ಮಿ ಆತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಮೂವರು ಹೆಣ್ಣಕ್ಕಳು ಎಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ. ಮತ್ತೊಂದು ಮಹಿಳೆ ಜತೆ ವಾಸವಿದ್ದಾನೆ. ಈಗ ನನಗೆ ಮೂವರು ಮಕ್ಕಳನ್ನು ಸಾಕುವುದಕ್ಕೆ ಆಗುತ್ತಿಲ್ಲ. ಮಕ್ಕಳ ಶಾಲಾ ಶುಲ್ಕ, ಮನೆ ಬಾಡಿಗೆ ಕಟ್ಟಲೂ ಕೂಡ ಆಗುತ್ತಿಲ್ಲ. ಇತ್ತೀಚಿಗೆ ಹುಟ್ಟಿರುವ ಹಸುಗೂಸನ್ನು ಆರೈಕೆ ಮಾಡುವುದು ಕಷ್ಟವಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.






