ಇತರೆ

ವರ್ಕ್‌ ಫ್ರಂ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Views: 86

ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನ ಬಾಗಲಗುಂಟೆಯಲ್ಲಿ 26 ವರ್ಷದ ನಿಕ್ಷೇಪ್ ಬಂಗೇರಾ ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು ಮೂಲದವರಾದ ಇವರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಶಂಕಿಸಲಾಗಿದೆ.

ಬಾಗಲಗುಂಟೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸ ಮಾಡುತ್ತಿದ್ದ ನಿಕ್ಷೇಪ್‌ ಅಲ್ಲಿಯೇ ತಮ್ಮ ಜೀವ ಕಳೆದುಕೊಂಡಿದ್ದಾರೆ. ವರ್ಕ್‌ ಫ್ರಂ ಹೋಮ್‌ನಲ್ಲಿ ನಿಕ್ಷೇಪ್‌ ಕೆಲಸ ಮಾಡುತ್ತಿದ್ದ. ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 16ನೇ ಮಹಡಿಗೆ ಬಂದು ಅಲ್ಲಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಗಳೂರು ಮೂಲದ ನಿಕ್ಷೇಪ್‌ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು, ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Related Articles

Back to top button
error: Content is protected !!