ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್; ಡಿಸಿಎಂ ಡಿಕೆಶಿ ಹೇಳಿದ್ದೇನು?
Views: 79
ಕನ್ನಡ ಕರಾವಳಿ ಸುದ್ದಿ: ಮುಖ್ಯಮಂತ್ರಿ ಪಟ್ಟಕ್ಕಾಗಿ ಎಲ್ಲಾ ರೀತಿಯ ಕಸರತ್ತು ಮಾಡುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು, ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ನಿರ್ಧರಿಸಿದೆ. ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಜನವರಿ 8ರಂದು ದೆಹಲಿಗೆ ಮರುಲಿದ್ದು ಆವಾಗ ಮತ್ತೆ ಹೈಕಮಾಂಡ್ ಜೊತೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಜನವರಿ 8ರಂದು ದೆಹಲಿಗೆ ಮರುಲಿದ್ದು ಆವಾಗ ಮತ್ತೆ ಹೈಕಮಾಂಡ್ ಜೊತೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಈ ಮಧ್ಯೆ ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಹಿರಿಯ ವೀಕ್ಷಕರಾಗಿ ನೇಮಕಗೊಂಡಿರುವ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ಸಿಗನಾಗಿ, ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಗುರುವಾರ ಹೇಳಿದ್ದಾರೆ.
ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಮತ್ತು ಜಾರ್ಖಂಡ್ ಮಾಜಿ ಶಾಸಕ ಬಂಧು ಟಿರ್ಕಿ ಅವರೊಂದಿಗೆ ಶಿವಕುಮಾರ್ ಅವರನ್ನು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಪಕ್ಷದ ಹಿರಿಯ ವೀಕ್ಷಕರಾಗಿ ಕಾಂಗ್ರೆಸ್ ಬುಧವಾರ ನೇಮಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಸದ್ಯಕ್ಕೆ ಮುಂದೂಡಿಕೆಯಾಗಿದೆ.
“ಕಾಂಗ್ರೆಸ್ಸಿಗನಾಗಿ, ನಾನು ಪಕ್ಷಕ್ಕಾಗಿ ಕೆಲಸ ಮಾಡಬೇಕು. ನಾನು ಎಐಸಿಸಿ ಪತ್ರಿಕಾ ಪ್ರಕಟಣೆಯನ್ನು ನೋಡಿದ್ದೇನೆ. ಅವರು ಅಸ್ಸಾಂ ಅನ್ನು ನೋಡಿಕೊಳ್ಳಲು ನನಗೆ ಹೇಳಿದ್ದಾರೆ. ನಾನು ಬಹಳ ಹಿಂದೆಯೇ ಅಸ್ಸಾಂಗೆ ಹೋಗಿದ್ದೆ ಮತ್ತು ಈಗ ಅವರು ನನ್ನನ್ನು ಮತ್ತೆ ಅಲ್ಲಿಗೆ ಹೋಗಲು ಬಯಸುತ್ತಾರೆ. ನಾನು ಹೋಗುತ್ತೇನೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.






