ಇತರೆ

ಚಾರ್ಮಾಡಿ ಘಾಟಿಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಲಾರಿ ಭಸ್ಮ: ಮೂವರು ಪಾರು 

Views: 30

ಕನ್ನಡ ಕರಾವಳಿ ಸುದ್ದಿ:ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.

ಚಿಕ್ಕಮಗಳೂರಿನಿಂದ ಮೂಡಬಿದಿರೆ ಕಡೆಗೆ ಮೆಕ್ಕೆಜೋಳದ ಲೋಡು ತೆಗೆದುಕೊಂಡು ಹೋಗುತ್ತಿದ್ದ ಲಾರಿ ಜ.9 ರಂದು ಮಧ್ಯರಾತ್ರಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿ ಮೂವರು ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದೆ.

ಲಾರಿಯ ಟಯರ್ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿದ್ದು, ಲಾರಿಯಲ್ಲಿದ್ದ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಲಾರಿಯೂ ಸಹ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ತೀವ್ರತೆಯಿಂದ ಚಾರ್ಮಾಡಿ ಘಾಟ್‌ನ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳೀಯ ಯವಕರು ಬೆಳ್ತಂಗಡಿ ಅಗ್ನಿಶಾಮಕ ದಳ ಮತ್ತು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದು‌, ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ.

Related Articles

Back to top button
error: Content is protected !!