ಶಿಕ್ಷಣ
ಮನೋಹರ್ ಉಪ್ಪುಂದ ಅವರಿಗೆ ಪಿಎಚ್‌ಡಿ ಪ್ರದಾನ
Views: 67
ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ–ಕುಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Merger and Acquisition of Commercial Banks: A Study with Special Reference to the Merger of SBI and its Associates” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ.
ಶ್ರೀ ಮನೋಹರ್ ಉಪ್ಪುಂದ ಅವರು ಉಪ್ಪುಂದದ ಮತ್ಸ್ಯೋದ್ಯಮಿ ಶ್ರೀ ಈಶ್ವರ ಬಬ್ರಿ ಹಾಗೂ ಶ್ರೀಮತಿ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ‍್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.






