ಸಾಮಾಜಿಕ

ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಬರ್ಬರ ಹತ್ಯೆ

Views: 93

ಕನ್ನಡ ಕರಾವಳಿ ಸುದ್ದಿ: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆಯ ಮಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಸ್ತಿ ವಿಚಾರಕ್ಕೆ ಅಣ್ಣ ಮತ್ತು ಆತನ ಮಕ್ಕಳೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಯೋಗೇಶ್ (35) ಕೊಲೆಯಾದ ವ್ಯಕ್ತಿ. ಈತನ ಮದುವೆ ನಿಶ್ಚಯವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಜೀವನ ಆರಂಭಿಸಲಿದ್ದ. ಆದರೀಗ ಆಸ್ತಿಗಾಗಿ ಈತನ ಪ್ರಾಣವನ್ನೇ ತೆಗೆದಿದ್ದಾರೆ.

ಆಸ್ತಿಗಾಗಿ ಸ್ವಂತ ಅಣ್ಣ ಮತ್ತು ಆತನ ಮಕ್ಕಳು ಸೇರಿಕೊಂಡು ತಮ್ಮನನ್ನು ಹತ್ಯೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅಣ್ಣ ಲಿಂಗರಾಜ್ (ನಿಂಗರಾಜು), ಅಣ್ಣನ ಮಕ್ಕಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಮನೆಯ ಕೊಟ್ಟಿಗೆಯಲ್ಲಿ ಇದ್ದಾಗ ಅಣ್ಣ ಮತ್ತು ಅಣ್ಣನ ಮಕ್ಕಳು ಹರಿತವಾದ ಆಯುಧಗಳೊಂದಿಗೆ ಬಂದು ಬರ್ಬರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!