ರಾಜಕೀಯ

ಮತ್ತೆ ಸಿಎಂ ಹುದ್ದೆ ಚರ್ಚೆ: ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ, ಡಿಸಿಎಂ ಡಿ.ಕೆ ಶಿವಕುಮಾರ್

Views: 23

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮತ್ತೆ ಸಿಎಂ ಹುದ್ದೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಮಾತ್ರ ಗೊತ್ತು. ಇದನ್ನೆಲ್ಲಾ ಸಾರ್ವಜನಿಕವಾಗಿ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕಿದ್ದಾರೆ ಎಂದಿದ್ದಾರೆ.

ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.

ದೆಹಲಿ ಭೇಟಿ ಬಗ್ಗೆ ಮಾತನಾಡಿ ”ನಾವು ದೆಹಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ. ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೇ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ನಿಮ್ಮ ಸಹೋದರ ಹೇಳಿದ್ದಾರೆ ಎಂದು ಕೇಳಿದಾಗ, ”ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ” ಎಂದರು.

Related Articles

Back to top button
error: Content is protected !!