ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ
Views: 84
ಕನ್ನಡ ಕರಾವಳಿ ಸುದ್ದಿ: ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೋಬ್ಬರಿ 22 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಭಾರತೀಯ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ರೈಲ್ವೆ ನೇಮಕಾತಿ ಮಂಡಳಿಗಳು (RRB) ಲೆವೆಲ್-1 ಹುದ್ದೆಗಳ ಭರ್ತಿಗೆ ಕೇಂದ್ರಿತ ಉದ್ಯೋಗ ಅಧಿಸೂಚನೆ (CEN) ಸಂಖ್ಯೆ 09/2025 ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ.
ಈ ಅಧಿಸೂಚನೆಯ ಮೂಲಕ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು ಸುಮಾರು 22,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಏಳನೇ ವೇತನ ಆಯೋಗದ ಪೇ ಮ್ಯಾಟ್ರಿಕ್ಸ್ ಅಡಿಯಲ್ಲಿ ಈ ನೇಮಕಾತಿ ನಡೆಯುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಿಲಾಗಿದೆ.
ಜ.21ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ
ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಿದೆ. 2026ರ ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ.
ಅರ್ಜಿ ಸಲ್ಲಿಕೆಗೆ ಫೆಬ್ರವರಿ 20ರವರೆಗೆ ಕಾಲಾವಕಾಶ ನೀಡಲಾಗಿದೆ.
ಅಭ್ಯರ್ಥಿಗಳು http://www.rrbapply.gov.in ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಕೂಡಲೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕಿದೆ.
ಮಾಸಿಕ ವೇತನ
ರೈಲ್ವೆ ಇಲಾಖೆಯ ಸದರಿ ಹುದ್ದೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಮತ್ತು ವೈದ್ಯಕೀಯ ಮಾನದಂಡಗಳು ಸಂಬಂಧಿಸಿದಂತೆ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಲೆವೆಲ್-1 ರ ವಿವಿಧ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ವೇತನವಾಗಿ ಮಾಸಿಕ 18,000 ರೂಪಾಯಿ ನಿಗದಿಪಡಿಸಲಾಗಿದೆ. ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಅಭ್ಯರ್ಥಿಗಳ ವಯೋಮಿತಿ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯೋಮಿತಿ 2026ರ ಜನವರಿ 1ರ ವೇಳೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷದೊಳಗೆ ಇರಬೇಕು. ಅಂಥವರು ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಜಾತಿ ಮೀಸಲಾತಿ ನಿಯಮಾನುಸಾರ ಆಯಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.






