ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಬಿಂಬಿಸಿ ವಿಡಿಯೋ ವೈರಲ್: ಯುವಕ ಆತ್ಮಹತ್ಯೆ
Views: 68
ಕನ್ನಡ ಕರಾವಳಿ ಸುದ್ದಿ: ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಬಿಂಬಿಸಿ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಪ್ರಸಾರವಾದ ನಂತರ ಕೇರಳ ಕೋಝಿಕ್ಕೋಡ್ ಮೂಲದ ದೀಪಕ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಆರೋಪಿ ಶಿಮಿತಾಳನ್ನು ಬಂಧಿಸಲಾಗಿದೆ.
ವಡಕಾರದಲ್ಲಿರುವ ಆಕೆಯ ಸಂಬಂಧಿಕರ ಮನೆಯಿಂದ ಮಹಿಳೆಯನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾದ ನಂತರ ಶಿಮಿತಾ ತಲೆಮರೆಸಿಕೊಂಡಿದ್ದರು. ಪೊಲೀಸರ ತನಿಖೆಯ ನಂತರ ಆಕೆಯನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಶಿಮಿತಾ ಈ ಹಿಂದೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
ಇನ್ನು ಬಸ್ ಪ್ರಯಾಣದ ಸಂದರ್ಭದಲ್ಲಿ ಕಿರುಕುಳಕ್ಕೆ ಒಳಗಾದ ಬಗ್ಗೆ ಯಾರೂ ದೂರು ನೀಡಿಲ್ಲ ಎಂದು ಪ್ರಯಾಣಿಕರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸಿದ ಇತರರ ಜೊತೆಗೆ ನೌಕರರ ಹೇಳಿಕೆಗಳನ್ನು ಶೀಘ್ರದಲ್ಲೇ ದಾಖಲಿಸಲಾಗುವುದು ಎಂದಿದ್ದಾರೆ.
ಪಯ್ಯನ್ನೂರಿನಲ್ಲಿ ಬಸ್ ಪ್ರಯಾಣದ ಸಮಯದಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಶಿಮಿತಾ ಇನ್ಸಾಗ್ರಾಮ್ನಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದರು. ಈ ವೀಡಿಯೊವನ್ನು ಒಂದು ದಿನದಲ್ಲಿ 2.3 ಮಿಲಿಯನ್ ಬಾರಿ ವೀಕ್ಷಿಸಲಾಗಿದೆ. ಇದು ವೈರಲ್ ಆದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡರು.






