ಶಿಕ್ಷಣ

ಸರಕಾರಿ ಪ್ರೌಢಶಾಲೆ ವಕ್ವಾಡಿ:ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಕಾರ್ಯಕ್ರಮ 

Views: 169

ಕನ್ನಡ ಕರಾವಳಿ ಸುದ್ದಿ: ಸರ್ಕಾರಿ ಪ್ರೌಢಶಾಲೆ ವಕ್ವಾಡಿಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಕಾರ್ಯಕ್ರಮ ನಡೆಯಿತು.

ಕುಂದಾಪುರ ಪೋಲೀಸ್ ಠಾಣೆಯ ಎಎಸ್ಐ ಶಾಂತರಾಮ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಅಪಘಾತಗಳನ್ನು ತಡೆಯಲು ಸಾಧ್ಯವಾಗುತ್ತದೆ. ಜೀವ ಅಮೂಲ್ಯವಾದದ್ದು, ಕ್ಷಣಿಕ ಅಜಾಗರೂಕತೆಯಿಂದ ಕುಟುಂಬಗಳು ಅನಾಥವಾಗುವ ಪರಿಸ್ಥಿತಿ ಉಂಟಾಗುತ್ತದೆ. ಆದ್ದರಿಂದ ವಾಹನ ಚಾಲಕರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ರಸ್ತೆ ಸುರಕ್ಷಾ ನಿಯಮವನ್ನು ಪಾಲಿಸುವುದರಿಂದ ಸಾರ್ವಜನಿಕರು ಧೈರ್ಯದಿಂದ ತಿರುಗಾಡಬಹುದು ಹಾಗೂ ಅಪಘಾತ ಮುಕ್ತ ಸಮಾಜ ನಿರ್ಮಿಸಬಹುದು ಮತ್ತು ಅಮಾಯಕರ ಸಾವು ನೋವು ತಪ್ಪಿಸಬಹುದು ಎಂದರು.

ಆ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರು ರಸ್ತೆ ಸುರಕ್ಷತೆಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಿದರೆ ಎಲ್ಲರ ಜೀವನ ಸುಖಕರವಾಗಿರುತ್ತದೆ ಎನ್ನುವುದನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುಹಾಗೆ ಅಗತ್ಯ ಮಾಹಿತಿಯನ್ನು ನೀಡಿದರು.

ಬೀಟ್ ಪೊಲೀಸ್ ನಾರಾಯಣ್ ಕಾರ್ಯಕ್ರಮಕ್ಕೆ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಕುಸುಮಾಕರ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು  ಸ್ವಾಗತಿಸಿದರು. ಶ್ರೀ ಧರ್ಮ ನಾಯಕ್ ಶಿಕ್ಷಕರು ಧನ್ಯವಾದ ಸಮರ್ಪಿಸಿದರು ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

 

Related Articles

Back to top button
error: Content is protected !!