ಶಿಕ್ಷಣ

ಬೈದಿದಕ್ಕೆ ಶಾಲಾ ಆವರಣದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ:6 ಶಿಕ್ಷಕರ ವಿರುದ್ದ ಕೇಸ್

Views: 117

ಕನ್ನಡ ಕರಾವಳಿ ಸುದ್ದಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಅಯ್ಯಪ್ಪ ಸೇರಿ 6 ಜನರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ.

9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21 ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಪವನ್‌ ತಂದೆ ಮಲ್ಲಪ್ಪ ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಿಕ್ಷಕರು ಬೈದಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿ ಕೊಂಡನಾ? ಅಥವಾ ಬೇರೆ ಏನಾದರೂ ಕಾರಣ ಇದ್ಯಾ ಎಂದು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!