ಶಿಕ್ಷಣ
ರಾಷ್ಟ್ರಮಟ್ಟದ ನೆಟ್ ಬಾಲ್ ಚಾಂಪಿಯನಶಿಪ್ ನಲ್ಲಿ ಪದಕ ಪಡೆದ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊಲ್ಲೂರು ದೇಗುಲದಿಂದ ನಗದು ಬಹುಮಾನ ನೀಡಿ ಸನ್ಮಾನ
Views: 35
ಕನ್ನಡ ಕರಾವಳಿ ಸುದ್ದಿ: ನ್ಯಾಷನಲ್ ಸ್ಕೂಲ್ ಗೇಮ್ಸ್ ಫೆಡರೇಷನ್ ಇಂಡಿಯಾದ 2025-26 ರ ನೆಟ್ ಬಾಲ್ ಚಾಂಪಿಯನಶಿಪ್ ನಲ್ಲಿ ಬೆಳ್ಳಿಯ ಪದಕ ಪಡೆದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊಲ್ಲೂರು ದೇವಸ್ಥಾನದ ವತಿಯಿಂದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಬಾಬು ಶೆಟ್ಟಿ ತಗ್ಗರ್ಸೆಯವರು ಪ್ರತಿಯೊಬ್ಬ ವಿದ್ಯಾರ್ಥಿಗೂ 15000 ರೂಪಾಯಿ ನಗದು ಬಹುಮಾನ ನೀಡಿ ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಸುರೇಂದ್ರ ಶೆಟ್ಟಿ , ರಘುರಾಮ ದೇವಾಡಿಗ, ಮಹಾಲಿಂಗ ನಾಯ್ಕ, ಸುಧಾ ಕೆ ಹಾಗೂ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ, ಬಿ. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಉಪಸ್ಥಿತರಿದ್ದರು.






