ಶಿಕ್ಷಣ
ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಬಸ್ರೂರು ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸದಲ್ಲಿ ಸನ್ಮಾನ
Views: 45
ಕನ್ನಡ ಕರಾವಳಿ ಸುದ್ದಿ: ತಾಲೂಕು ಆಡಳಿತ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ವತಿಯಿಂದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಶಾರದ ಆಂಗ್ಲ ಮಾಧ್ಯಮ ಶಾಲೆ, ಬಸ್ರೂರು, ಕುಂದಾಪುರ ಇಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಾದ 8ನೇ ತರಗತಿಯ ನೌಮಾನ್ ಮತ್ತು 10ನೇ ತರಗತಿಯ ಪೃಥ್ವಿರಾಜ್ ಇವರನ್ನು ಜನವರಿ 26 ರಂದು 77 ನೇ ಗಣರಾಜ್ಯೋತ್ಸವ ಆಚರಣೆ ಪ್ರಯುಕ್ತ ಗಾಂಧಿ ಮೈದಾನ ಕುಂದಾಪುರದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.






