ಶಿಕ್ಷಣ
ಶಂಕರನಾರಾಯಣ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ
Views: 300
ಕನ್ನಡ ಕರಾವಳಿ ಸುದ್ದಿ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಜನವರಿ 26 2026 ರಂದು ಸಂಭ್ರಮದಿಂದ ಆಚರಿಸಲಾಯಿತು.
ವಿದ್ಯಾರ್ಥಿನಿಯರು ಧ್ವಜ ಗೀತೆ ಹಾಗೂ ಪ್ರಾರ್ಥನಾ ಗೀತೆಯನ್ನು ಶುಶ್ರಾವ್ಯವಾಗಿ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಮೆರುಗು ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕುಮಾರಿ ರೆನಿಟಾ ಲೋಬೊ ಅವರು ಧ್ವಜಾರೋಹಣ ನೆರವೇರಿಸಿದರು.
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಮತಾ ಪೂಜಾರಿ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಡೆ-ನುಡಿ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಆದರ್ಶ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಹಾಗೂ ಸತತ ಪರಿಶ್ರಮದಿಂದ ಪ್ರಗತಿ ಸಾಧಿಸಿ, ಭವಿಷ್ಯದಲ್ಲಿ ದೇಶದ ಅಭಿವೃದ್ಧಿಗೆ ಶ್ರಮಿಸಿ, ತಮ್ಮ ದೇಶಪ್ರೇಮ ವ್ಯಕ್ತಪಡಿಸಬೇಕು ಎಂದು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ವಿದ್ಯಾರ್ಥಿಗಳು ರಿಂಗ್ ಡ್ಯಾನ್ಸ್, ಡಂಬೆಲ್ಸ್, ಲೇಜಿಮ್ ಹಾಗೂ ನೃತ್ಯಗಳನ್ನು ಮನಮುಟ್ಟುವಂತೆ ಪ್ರದರ್ಶಿಸಿದರು.
7ನೇ ತರಗತಿಯ ಶ್ರವೀಕ್ ಸ್ವಾಗತಿಸಿ, 7ನೇ ಕರಣ್ ತರಗತಿಯ ವಂದಿಸಿದರು. 7 ನೇ ತರಗತಿಯ ಅದಿತಿ ಹಾಗೂ ಶ್ರೀದೇವಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸಾಂಸ್ಕೃತಿಕ ಹಾಗೂ ಭಾಷಾ ಸಂಯೋಜಕಿ ಕುಮಾರಿ ಅಲಿಟಾ ಡೇಸಾ ಅವರು ಅವರು ಸಂಪೂರ್ಣ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಿದರು. ಎಲ್ಲಾ ವಿಭಾಗಗಳ ಶಿಕ್ಷಕ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಸಹಕರಿಸಿದರು.











