ಇತರೆ
4 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್
Views: 58
ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಲಂಚದ ಹಣ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ, ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.






