ಯಶವಂತಪುರ-ಮಡಗಾಂವ್ ವಿಶೇಷ ರೈಲು: ಎಲ್ಲೆಲ್ಲಿ ನಿಲುಗಡೆ?
Views: 126
ಬೆಂಗಳೂರು: ಮಹಾ ಶಿವರಾತ್ರಿ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ವಿಶೇಷ ರೈಲು ಓಡಿಸಲಿದೆ.
ರೈಲು ಸಂಖ್ಯೆ 06507 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆ.13ರಂದು ಮಧ್ಯಾಹ್ನ 12.30 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 06:45 ತಲುಪಲಿದೆ. ಮಡಗಾಂವ್ 06508 ರೈಲು ಸಂಖ್ಯೆ ಮಡಗಾಂವ್ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಫೆ. 16 ರಂದು ಬೆಳಿಗ್ಗೆ 11 ಗಂಟೆಗೆ ಮಡಗಾಂವ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 04:45ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು 20 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 1 ಪ್ರಥಮ ದರ್ಜೆ ಎಸಿ ಕಮ್ ಎಸಿ 2-ಟೈರ್ ಬೋಗಿ, 2 ಎಸಿ 2-ಟೈರ್ ಬೋಗಿಗಳು, 2 ಎಸಿ 3-ಟೈರ್ ಬೋಗಿಗಳು, 9 ಸ್ವೀಪರ್ ಕ್ಲಾಸ್ ಬೋಗಿಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಬೋಗಿಗಳು ಇರಲಿವೆ.
ರೈಲು ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲುಗಳಿಗೆ ಚಿಕ್ಕಬಾಣಾವರ , ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.






