ರಾಜಕೀಯ

ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ನಿಧನ

Views: 91

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ತ್ರಾಸಿ ರಾಜು ದೇವಾಡಿಗ (66) ಅವರು ಅಸೌಖ್ಯದಿಂದ ಫೆ. 2ರಂದು ನಿಧನ ಹೊಂದಿದರು.

ಕಳೆದ ಕೆಲವು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತರು ಪತ್ನಿ ಮೂವರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.

ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಹಕಾರ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು.

ತ್ರಿಸ್ತರ ಆಡಳಿತವನ್ನು ಪ್ರತಿನಿಧಿಸಿ, ಗ್ರಾ.ಪಂ., ತಾ.ಪಂ., ಜಿ.ಪಂ.ಗಳಲ್ಲಿಚುನಾಯಿತ ಪ್ರತಿನಿಧಿಯಾಗಿದ್ದರು. 2007ರಲ್ಲಿ ಕುಂದಾಪುರ ತಾ.ಪಂ. ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸಹಕಾರ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡು ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಂಗೊಳ್ಳಿಯ ಪಂಚಗಂಗಾವಳಿ ಸಹಕಾರಿ ಸಂಘದ ಅಧ್ಯಕ್ಷ ಬೇರೆ ಬೇರೆ ಸಹಕಾರ ಸಂಘಗಳಲ್ಲಿ ನಿರ್ದೇಶಕ, ಗುಜ್ಜಾಡಿ ಭಾಸ್ಕರ ಪೈ ಸ್ಮಾರಕ ಶಾಲೆಯ ಸಂಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿದ್ದರು.

 

Related Articles

Back to top button
error: Content is protected !!