ಇತರೆ

ದಕ್ಷ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಯಲ್ಲಾಲಿಂಗ ಕುನ್ನೂರ ನಿಧನ

Views: 151

ಕನ್ನಡ ಕರಾವಳಿ ಸುದ್ದಿ: ಮುಂಡಗೋಡ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಯಲ್ಲಾಲಿಂಗ ಕುನ್ನೂರ(33) ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಾಮಾಲೆ ಮತ್ತು ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ದಾಖಲಾಗಿದ್ದರು.

ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನವರಾದ ಯಲ್ಲಾಲಿಂಗ ಅವರು ಅತ್ಯಂತ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಮುಂಡಗೋಡ ಪೊಲೀಸ್ ಠಾಣೆಗೆ ಎರಡನೇ ಬಾರಿಗೆ ಪಿ.ಎಸ್.ಐ ಆಗಿ ಅಧಿಕಾರ ಸ್ವೀಕರಿಸಿದ್ದ ಇವರು, ಈ ಹಿಂದೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದರು.

ಕೇವಲ 33ನೇ ವಯಸ್ಸಿನಲ್ಲಿಯೇ ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅವರು, ಅಕಾಲಿಕ ಮರಣಕ್ಕೆ ತುತ್ತಾಗಿರುವುದು ಸಾರ್ವಜನಿಕರಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ತೀವ್ರ ಆಘಾತ ಮೂಡಿಸಿದೆ. ಮೃತರು ಒಬ್ಬ ಪುತ್ರಿಯನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Related Articles

Back to top button
error: Content is protected !!