ಇತರೆ

ಭೀಕರ ಅಪಘಾತ– ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

Views: 105

ಕನ್ನಡ ಕರಾವಳಿ ಸುದ್ದಿ: ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48), ಮರಿಯಂಬೂ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣಕ್ಕೆ ಕಡಲೆ ಕೀಳಲು ಹೊರಟಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!