ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಅಚ್ಚರಿ ಹೇಳಿಕೆ ನೀಡಿದ ಯತೀಂದ್ರ ಸಿದ್ದರಾಮಯ್ಯ

Views: 92

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೆಲ ದಿನಗಳಿಂದ ತಣ್ಣಗಾಗಿರುವ ಬೆನ್ನಲ್ಲೇ ಸಿಎಂ ಪುತ್ರ, ಎಂ ಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ನಮ್ಮ ತಂದೆ 5ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ಮುಗಿಸುತ್ತಾರೆ ಎಂದು ಹೇಳಿದರು.

ಸದ್ಯಕ್ಕೆ ಯಾವುದೇ ಬದಲಾವಣೆಯೂ ಇಲ್ಲ. ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ನಮ್ಮ ತಂದೆ 5 ವರ್ಷ ಸಿಎಂ ಆಗಿ ಪೂರ್ಣಾವಧಿ ಮುಗಿಸುತ್ತಾರೆ. ಈ ಬಗ್ಗೆ ಹೈಕಮಾಂಡ್ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿಸಿದ್ದಾರೆ.

Related Articles

Back to top button
error: Content is protected !!