ಇತರೆ

ಖಾಸಗಿ ಬಸ್- ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತ: ಯುವತಿ ಸ್ಥಳದಲ್ಲಿ ಸಾವು

Views: 111

ಕನ್ನಡ ಕರಾವಳಿ ಸುದ್ದಿ:  ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬಸ್ ಸ್ಕೂಟರ್ ಸಹಸವಾರೆಯ ಮೇಲೆಯೇ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರು ವೃತ್ತದ ಬಳಿ ನಡೆದಿದೆ.

ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಎಂಬಾಕೆ ಮೃತಪಟ್ಟ ಯುವತಿ. ಈಕೆ ಕಿಶೋರ್(32) ಎಂಬವರೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ಇವರಿದ್ದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಸಹ ಸವಾರೆ ದೀಪ್ತಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ, ಬಸ್ ಆಕೆಯ ಹೊಟ್ಟೆಯ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ದೀಪ್ತಿಯನ್ನು ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ. ಸ್ಕೂಟರ್ ಸವಾರ ಕಿಶೋರ್ ಅಪಾಯದಿಂದ ಪಾರಾಗಿದ್ದಾರೆ.

Related Articles

Back to top button
error: Content is protected !!