ರಾಜಕೀಯ
ಮುಖ್ಯಮಂತ್ರಿ ಬದಲಾವಣೆ ಮತ್ತೆ ಮುನ್ನೆಲೆಗೆ, ಯತೀಂದ್ರ ಅವರೇ ನಮ್ಮ ಹೈಕಮಾಂಡ್: ಡಿಕೆಶಿ
Views: 29
ಕನ್ನಡ ಕರಾವಳಿ ಸುದ್ದಿ: ಯತೀಂದ್ರ ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದರು.
ಮುಂದಿನ ಐದು ವರ್ಷಗಳಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರಲಿದ್ದಾರೆ ಈ ಬಗ್ಗೆ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದ್ದು, ಯಾವುದೇ ಊಹಾಪೋಹ ಇಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಮೈಸೂರಿನಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಈ ರೀತಿ ತಿರುಗೇಟು ನೀಡಿದ್ದಾರೆ.
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಅವರು ಅಧಿಕಾರ ಒಪ್ಪಂದದ ಬಗ್ಗೆ ಸ್ಪಷ್ಟನೆ ಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಬಸವರಾಜು, ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ, ಏನೇ ಪ್ರತಿಕ್ರಿಯೆ ನೀಡುವುದಿದ್ದರೂ ದೆಹಲಿಯವರು ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಿದರು.






