ಶಿಕ್ಷಣ
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ
Views: 176
ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಗಾರ್ಗಿದೇವಿ ಭರತನಾಟ್ಯದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಭರತನಾಟ್ಯ ಪ್ರವೀಣೆ ವಿದ್ಯಾರ್ಥಿನಿ ಗಾರ್ಗಿದೇವಿಯ ಈ ಅಮೋಘ ಸಾಧನೆಯನ್ನು ಶ್ಲಾಘಿಸಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಎಂ. ಸುಕುಮಾರ್ ಶೆಟ್ಟಿಯವರು, ಕಾರ್ಯದರ್ಶಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂಧಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.






