ಇತರೆ
ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು ಪಲ್ಟಿ, ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ
Views: 510
ಕನ್ನಡ ಕರಾವಳಿ ಸುದ್ದಿ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿ ಆರು ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಸೋಮವಾರ ಮಧ್ಯಾಹ್ನ ತೆಕ್ಕಟ್ಟೆ ಕಣ್ಣುಕೆರೆ ನವಶಕ್ತಿ ಕಲ್ಯಾಣ ಮಂಟಪದ ಎದುರುಗಡೆ ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಒಟ್ಟು 12 ಮಂದಿ ವಿದ್ಯಾರ್ಥಿಗಳು ಎರಡು ಕಾರುಗಳಲ್ಲಿ ಪ್ರವಾಸಕ್ಕೆ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚುನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
.






