ಇತರೆ

ಮಂಗಳೂರು:ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಪೊಲೀಸರು

Views: 28

ಕನ್ನಡ ಕರಾವಳಿ ಸುದ್ದಿ: ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳು:ಮುಸ್ತಫಾ ಸೀದಿಯಬ್ಬ (34) ಮೈಯದ್ದಿ (28) ಮೊಹಮ್ಮದ್ ಶಿಫಾನ್ (28)

ಘಟನೆಯ ವಿವರ:ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಫೆಬ್ರವರಿ 12ರಂದು ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ದಂಧೆ ಬೆಳಕಿಗೆ ಬಂದಿದೆ.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related Articles

Back to top button
error: Content is protected !!