ಇತರೆ

ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ ರೇಪ್;ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್ 

Views: 58

ಕನ್ನಡ ಕರಾವಳಿ ಸುದ್ದಿ: ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹಂಪಿ ಬಳಿಯ ಸಾಣಾಪುರದಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಗಂಗಾವತಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.

ಈ ಪ್ರಕರಣದ ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದ್ದ ಕೋರ್ಟ್, ಇದೀಗ ಮರಣದಂಡನೆ ವಿಧಿಸಿದೆ.

ಇದೇ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷಿ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು.

Related Articles

Back to top button
error: Content is protected !!