ಸಾಂಸ್ಕೃತಿಕ

ಶ್ವಾಸಕೋಶ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಕಿರುತೆರೆ ನಟಿ ‘ರಶ್ಮಿ ಲೀಲಾ’ ಇನ್ನಿಲ್ಲ

Views: 119

ಕನ್ನಡ ಕರಾವಳಿ ಸುದ್ದಿ: ಕೆಲ ದಿನಗಳಿಂದ ಗಂಭೀರ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಸೋಮವಾರ ನಿಧನರಾಗಿದ್ದಾರೆ.

ಶ್ವಾಸಕೋಶದ ಕಾಯಿಲೆಯಾದ ಪಲ್ಮನರಿ ಫೈಬ್ರೋಸಿಸ್‌ನಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳ ಹಿಂದಷ್ಟೇ ಸೂಕ್ತ ದಾನಿಗಳು ಬಂದ ಹಿನ್ನಲೆಯಲ್ಲಿ ಶ್ವಾಸಕೋಶದ ಟ್ರಾನ್ಸ್ ಪ್ಲಾಂಟ್ ಕೂಡ ಮಾಡಲಾಗಿತ್ತು ಎನ್ನಲಾಗಿದೆ.

ಆ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿರುತೆರೆ ನಟಿ ರಶ್ಮಿ ಲೀಲಾಗೆ ಚಿಕಿತ್ಸೆ ಮುಂದುವರೆದಿತ್ತು. ಆದರೇ ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸುದ್ದಿಯನ್ನು ಅವರ ಪತಿ ಸಾರಕ್ಕಿ ಮಂಜು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪೋಸ್ಟ್ ಮಾಡಿದ್ದ ಸಾರಕ್ಕಿ ಮಂಜು, ಹೃದಯದ ಬಡಿತ ತೀವ್ರ ಇಳಿಮುಖ ಆಗುತ್ತಿದೆ. ಕೊನೆಯ ಬಾರಿಗೆ ಒಂದು ಸಲ, ಒಂದೇ ಒಂದು ಸಲ ಈ ನನ್ನ ಜೀವ ಉಳಿದು ಬಿಡಲಿ. ಉಳಿಸಿಕೊಡಲೆಂದು ನಿಮ್ಮ ಇಷ್ಟ ದೇವರನ್ನು ಪ್ರಾರ್ಥಿಸಿ ಬಿಡಿ ಎಂದು ಪೋಸ್ಟ್ ಹಾಕಿದ್ದರು.

ಬಳಿಕ ನಮ್ಮ ಪ್ರಾಣ ಹೊರಟು ಹೋಯ್ತು ಎಂದು ಮತ್ತೊಂದು ಪೋಸ್ಟ್ ಹಾಕಿ ರಶ್ಮಿ ಲೀಲಾ ನಿಧನದ ವಿಚಾರ ತಿಳಿಸಿದ್ದಾರೆ.

Related Articles

Back to top button
error: Content is protected !!