ಕುಂದಾಪುರ:ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿ
Views: 95
ಕನ್ನಡ ಕರಾವಳಿ ಸುದ್ದಿ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ-66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್‌ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಅಂಗಡಿ ಮಾಲೀಕ ಫಣಿರಾಜ್ ಹತ್ವಾರ್ ಕೊರವಡಿ ಅವರು ನಿತ್ಯದಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಅಗ್ನಿ ಅವಘಡದಲ್ಲಿ ಕಂಪ್ಯೂಟರ್‌ಗಳು, ಪ್ರಿಂಟರ್‌ಗಳು, ಸ್ಟೇಷನರಿ ಸಾಮಗ್ರಿಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, ಟೇಬಲ್ ಸೇರಿದಂತೆ ವಿವಿಧ ಉಪಕರಣಗಳು ಸುಟ್ಟು ಭಸ್ಮವಾಗಿವೆ. ಘಟನೆಯಿಂದ ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯ ಯುವಕರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ನಂತರ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






