ಸಾಮಾಜಿಕ

ಗಂಡ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರಕ್ಕೆ ಪತ್ನಿಯೂ ನೇಣಿಗೆ ಶರಣು; ಸಾಯುವ ಮುನ್ನ ತಾಯಿಗೆ ಕಳುಹಿಸಿದ ಮೆಸೇಜ್ ನಲ್ಲಿ ಏನಿದೆ?

Views: 115

ಕನ್ನಡ ಕರಾವಳಿ ಸುದ್ದಿ: ಗಂಡ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರಕ್ಕೆ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸಿದ್ದಾಪುರದಲ್ಲಿ ನಡೆದಿದೆ.

ಗೋಣಿಬೀಡು ಗ್ರಾಮದ 36 ವರ್ಷದ ಸ್ವಾತಿ.ಜೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಸ್ವಾತಿಯ ಪತಿ ಜಗದೀಶ್ ಅವರು KSISF ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14 ರಂದು ಜಗದೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಪೊಲೀಸ್ ಪೇದೆ ಕಾಟ?ಸ್ವಾತಿ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸ್ ಪೇದೆಯೊಬ್ಬರ ಹೆಸರು ಕೇಳಿ ಬಂದಿದೆ. ಸ್ವಾತಿ ಸಾಯುವ ಮುನ್ನ ತನ್ನ ತಾಯಿಗೆ ಮೆಸೇಜ್ ಮಾಡಿದ್ದು, ಅದರಲ್ಲಿ ಮೋಹನ್ ಎಂಬ ಪೊಲೀಸ್‌ ಪೇದೆಯ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ಮೋಹನ್ ಎಂಬ ಪೊಲೀಸ್ ತನಗೆ ಮೆಸೇಜ್ ಮಾಡಿದ್ದರು. ಬ್ಲಾಕ್ ಮಾಡಿದ್ದಕ್ಕೆ, ಆತ ತನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂದು ಸ್ವಾತಿ ಡೆತ್‌ ನೋಟ್‌ನಲ್ಲಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ವಾತಿ ಹಾಗೂ ಜಗದೀಶ್ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪ್ರಕರಣ ಸಂಬಂಧ ಭದ್ರಾವತಿಯ ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related Articles

Back to top button
error: Content is protected !!