ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಈ ಐದು ಜಿಲ್ಲೆಗಳಲ್ಲಿ ದಿಢೀರ್ ಮಳೆಯಾಗುವ ಮುನ್ಸೂಚನೆ
Views: 138
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಾದ್ಯಂತ ಬೇಸಿಗೆ ಕಾಲ ಶುರುವಾಗಿದ್ದು, ದಿಢೀರ್ ಹವಾಮಾನ ಇಲಾಖೆ ಬದಲಾವಣೆಯ ಮುನ್ಸೂಚನೆ ಕೊಟ್ಟಿದೆ. ರಾಜ್ಯದ ಐದು ಪ್ರಮುಖ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ..
ಹವಾಮಾನ ಇಲಾಖೆ ಕರ್ನಾಟಕದಾದ್ಯಂತ ರಾಜ್ಯಕ್ಕೆ ಪ್ರಮುಖ ಎಚ್ಚರಿಕೆಗಳನ್ನು ನೀಡಿದೆ. ಕಡಿಮೆ ಒತ್ತಡದ ಪ್ರದೇಶದ ಪ್ರಭಾವದಿಂದಾಗಿ ಮುಂದಿನ ಎರಡು ದಿನಗಳವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯಾಗಲಿದ್ದಯ ಮುಂದಿನ 24 ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ..
ಬಂಗಾಳ ಕೊಲ್ಲಿಯ ಈ ಬದಲಾವಣೆಯಿಂದಾಗಿ ಈ ಐದು ಪ್ರಮುಖ ಜಿಲ್ಲೆಗಳಿಗೆ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ ಈ ಐದು ಜಿಲ್ಲೆಗಳಲ್ಲಿ ಮುಂದಿನ 2 ರಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.






