ಸಾಮಾಜಿಕ

ಮಗಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಅಳಿಯನ ಮನೆಗೆ ಬೆಂಕಿ ಇಟ್ಟ ಮಾವ!

Views: 14

ಕನ್ನಡ ಕರಾವಳಿ ಸುದ್ದಿ: ತನ್ನ ವಿರೋಧದ ನಡುವೆಯೂ ಪ್ರಿತಿಸಿದವನನ್ನು ಮದುವೆಯಾಗಿದ್ದಕ್ಕೆ ಯುವಕನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿರುವ ಘಟನೆ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವಿನೋದ್ ಎಂಬ ಯುವಕ ಹಾಗೂ ಪಕ್ಕದ ಮನೆಯ ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯವರ ವಿರೋಧದ ಫೆ.12 ರಂದು ಮದುವೆಯಾಗಿದ್ದರು. ಇದರಿಂದ ಕೋಪಗೊಂಡ ಯುವತಿಯ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ವಿನೋದ್ ಮನೆಗೆ ಬೆಂಕಿ ಹಚ್ಚಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಪ್ರಾಣಾಪಾಯ ಸಂಭವಿಸಿಲ್ಲ. ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಅಡುಗೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಬೆಂಕಿಯಿಟ್ಟ ಚನ್ನೇಗೌಡನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿನೋದ್‌ ಕುಟುಂಬಸ್ಥರು ಮನೆಯಲ್ಲಿ 10 ಲಕ್ಷ ರೂ. ನಗದು, 250 ಗ್ರಾಂ ಚಿನ್ನವಿತ್ತು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಮುಂಜಾಗ್ರತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

Related Articles

Back to top button
error: Content is protected !!