ಇತರೆ

ಉಡುಪಿಯ ನಡುರಸ್ತೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ 

Views: 121

ಕನ್ನಡ ಕರಾವಳಿ ಸುದ್ದಿ: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕಲ್ಸಂಕ ಜಂಕ್ಷನ್‌ನಲ್ಲಿ ಯುವಕನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಗದಗ ಮೂಲದ ಯುವಕ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದ ಎನ್ನಲಾಗಿದೆ.

ಸಂಚಾರ ದಟ್ಟಣೆಯ ನಡುವೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸ್ಥಳದಲ್ಲಿದ್ದ ಪೊಲೀಸರ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಪೊಲೀಸರು ಯುವಕನನ್ನು ಮನವೊಲಿಸಿ ಗದಗಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!