ಬೆಂಗಳೂರಿನಿಂದ ಬಂದು ವಿಟ್ಲದ ಗುರುಕುಲದಲ್ಲಿ ಓದುತ್ತಿದ್ದ ಬಾಲಕಿ ಕೆರೆಯಲ್ಲಿ ಶವವಾಗಿ ಪತ್ತೆ, ಸಾವಿನ ಸುತ್ತ ನಿಗೂಢ!
Views: 72
ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನಿಂದ ಬಂದು ಇಲ್ಲಿನ ಗುರುಕುಲದಲ್ಲಿ ಓದುತ್ತಿದ್ದ ಬಾಲಕಿಯೋರ್ವಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮೂರುಕಜೆ ಪ್ರದೇಶದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯು ವಿಟ್ಲದ ಕೊಡಂಗಾಯಿ ಬಳಿಯ ಮೂರುಕಜೆ ಗುರುಕುಲದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯೂ ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ಫೆ 22 ರಂದು ನಾಪತ್ತೆಯಾಗಿದಳು. ಆತಂಕಗೊಂಡ ಗುರುಕುಲದ ಆಡಳಿತ ಮಂಡಳಿ ಹಾಗೂ ಸ್ಥಳೀಯರು ಈಕೆಗಾಗಿ ವ್ಯಾಪಕ ಶೋಧ ನಡೆಸಿದ್ದರು.
ವಿಷಯ ತಿಳಿದ ತಕ್ಷಣ ವಿಟ್ಲ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ‘ಫ್ರೆಂಡ್ಸ್ ವಿಟ್ಲ’ ತಂಡದ ಮುರಳೀಧರ ಅವರ ಸಹಾಯದಿಂದ ಶವವನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಸಾವಿನ ಸುತ್ತಲಿನ ನಿಗೂಢತೆಯನ್ನು ಬೇಧಿಸಲು ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.






