ಸಾಂಸ್ಕೃತಿಕ
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಚಿತ್ರನಟ ರಿಯಲ್ ಸ್ಟಾರ್ ಉಪೇಂದ್ರ ಭೇಟಿ
Views: 77
ಕನ್ನಡ ಕರಾವಳಿ ಸುದ್ದಿ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಕನ್ನಡದ ಚಿತ್ರನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಕುಟುಂಬ ಸಮೇತರಾಗಿ ಫೆ.24ರ ಮಂಗಳವಾರ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
A, ಉಪೇಂದ್ರ, ರಕ್ತ ಕಣ್ಣೀರು, ಸೂಪರ್, ಕಬ್ಜಾ, UI, ಕೂಲಿ, ತರ್ಲೆ ನನ್ಮಗ, ‘ಓಂ, ಸೂಪರ್ ‘UI ಅವರ ಪ್ರಮುಖ ಚಿತ್ರಗಳು. ಪ್ರಜಾಕೀಯ (KPJP) ಮೂಲಕ ರಾಜಕೀಯದಲ್ಲೂ ಸಕ್ರಿಯರಾದ ಕನ್ನಡ ಚಿತ್ರರಂಗದ ವಿಶಿಷ್ಟ ನಿರ್ದೇಶಕ, ನಟ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ದಂಪತಿಗಳನ್ನು ದೇವಳದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಅವರು ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ವ್ಯಾಸ ಉಪಾಧ್ಯಾಯ ಮತ್ತು ಸಹೋದರರು, ದೇವಳದ ವ್ಯವಸ್ಥಾಪಕ ನಟೇಶ್ ಕಾರಂತ್, ಅರ್ಚಕ ವೃಂದದವರು,ಸಿಬಂದಿಗಳು ಉಪಸ್ಥಿತರಿದ್ದರು.






