ಶಿಕ್ಷಣ

ಕುಂದಾಪುರ:ಎನ್ನೆಸ್ಸೆಸ್ ಶಿಬಿರಕ್ಕೆ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಅಪಘಾತ: ವಿದ್ಯಾರ್ಥಿಗಳು ಅಪಾಯದಿಂದ ಪಾರು

Views: 256

ಕನ್ನಡ ಕರಾವಳಿ ಸುದ್ದಿ:  ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಹಳ್ಳಿಹೊಳೆ ಸಮೀಪದ ಶೆಟ್ಟಿಪಾಲು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಹಳ್ಳಿಹೊಳೆ ಗ್ರಾಮದ ಸುಳಗೊಡು ಶಾಲೆಯಲ್ಲಿ ನಡೆಯುತ್ತಿದ್ದ ಎನ್ನೆಸ್ಸೆಸ್ ಶಿಬಿರಕ್ಕೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಉರುಳಿ ಬಿದ್ದಿದೆ. ಈ ವೇಳೆ ಬಸ್ ತೆಂಗಿನ ಮರಕ್ಕೆ ಢಿಕ್ಕಿಯಾಗಿ ನಿಂತಿದ್ದರಿಂದ ಭಾರೀ ಅನಾಹುತ ತಪ್ಪಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ

Related Articles

Back to top button
error: Content is protected !!