ಸಾಂಸ್ಕೃತಿಕ
ನಿರ್ದೇಶರನ್ನು ಅಪಹರಿಸಿ ಚಿನ್ನಾಭರಣ ನಗದು ದೋಚಿರುವ ಪ್ರಕರಣ: ನಟಿ ಐಶ್ವರ್ಯಾ ಸೇರಿದಂತೆ 11 ಜನರ ಬಂಧನ
Views: 79
ಕನ್ನಡ ಕರಾವಳಿ ಸುದ್ದಿ: ಕನ್ನಡ ಸಿನಿಮಾ ನಿರ್ದೇಶಕರೊಬ್ಬರನ್ನು ಅಪಹರಿಸಿ, ಹಲ್ಲೆ ಮಾಡಿ, ಚಿನ್ನಾಭರಣ ಮತ್ತು ನಗದು ದೋಚಿರುವ ಆರೋಪದ ಮೇಲೆ ನಟಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಫೆಬ್ರವರಿ 11 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ನಿರ್ದೇಶಕರ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಭಾವಿಯೂ ಆಗಿರುವ ಮತ್ತು ಭೀಮಾ ಚಿತ್ರದಲ್ಲಿ ಅಭಿನಯಿಸಿದ್ದ ಐಶ್ವರ್ಯ ಎಂಬ ನಟಿಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.






