ಜನಮನ

ಪೊಲೀಸ್‌ ಇಲಾಖೆಯ ಮ್ಯಾರಥಾನ್ ನಲ್ಲಿ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀ‌ರ್ ಹುಸೇನ್ ಕುಸಿದು ಬಿದ್ದು ಮೃತ್ಯು

Views: 144

ಕನ್ನಡ ಕರಾವಳಿ ಸುದ್ದಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ರವಿವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀ‌ರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು ಎನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನಾಸಿರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.

Related Articles

Back to top button
error: Content is protected !!