ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ :ಪದವಿ ಪ್ರಧಾನ ಸಮಾರಂಭ
Views: 29
ಕನ್ನಡ ಕರಾವಳಿ ಸುದ್ದಿ: ಫಾರ್ಚೂನ್ ಅಕಾಡೆಮಿಕ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಬ್ರಹ್ಮಾವರ -ಹಂಗಾರಕಟ್ಟೆಯ ಫಾರ್ಚುನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಸಂಸ್ಥೆಯ ಬಿಎಸ್ಸಿ ನರ್ಸಿಂಗ್, ಜಿಎನ್ಎಂ, ಮತ್ತು ಡಿಎಂಎಲ್ ಟಿ, DOT and AT ವಿದ್ಯಾರ್ಥಿಗಳಿಗೆ ‘ಪದವಿ ಪ್ರಧಾನ ಸಮಾರಂಭ- 2026’ ಮಾರ್ಚ್1 ರಂದು ಸಂಸ್ಥೆಯ ವಠಾರದಲ್ಲಿ ನಡೆಯಿತು.
ಸಮಾರಂಭದ ಮುಖ್ಯ ಅಬ್ಯಾಗತರಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮೆಡಿಕಲ್ ಸೈನ್ಸ್ ಮತ್ತು ರೀಸರ್ಚ್ ಸೆಂಟರ್ ಡೀನ್ ಡಾ. ಮಹಾಬಲೇಶ್ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ನೆರವೇರಿಸಿದರು.
ಅವರು ಮಾತನಾಡಿ, ಮೇ 12ರಂದು ಆಧುನಿಕ ನರ್ಸಿಂಗ್ ವಿಭಾಗಕ್ಕೆ ಅಡಿಪಾಯ ಹಾಕಿದ ಪ್ಲಾರೆನ್ಸ್ ನೈಂಟಿಂಗೇಲ್ ಅವರ ಜನ್ಮದಿನದಂದು ದಾದಿಯರ ಸೇವೆಯನ್ನು ಸ್ಮರಿಸುತ್ತದೆ.
ದಾದಿಯರು ಆರೋಗ್ಯ ಕ್ಷೇತ್ರದ ಬೆನ್ನೆಲುಬು ಅವರು ರೋಗಿಗಳ ಆರೈಕೆಯಲ್ಲಿ ಮಹತ್ವದ ಪಾತ್ರ ವಹಿಸುವುದರೊಂದಿಗೆ ರೋಗಿಗಳಿಗೆ ಮಾನಸಿಕ ಧೈರ್ಯ ಮತ್ತು ಪ್ರೀತಿಯ ಆರೈಕೆಗೆ ಪ್ರಮುಖ ಕಾರಣರಾಗಿರುತ್ತಾರೆ. ಅವರ ನಿಸ್ವಾರ್ಥ ಸೇವೆ ಬೆಲೆ ಕಟ್ಟಲು ಸಾಧ್ಯವಿಲ್ಲ ಆರೋಗ್ಯ ಕ್ಷೇತ್ರಕ್ಕೆ ದಾದಿಯರ ಪಾತ್ರ ಅತ್ಯಗತ್ಯ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಫಾರ್ಚೂನ್ ಅಕಾಡೆಮಿಕ್ ಮತ್ತು ಕಲ್ಚರಲ್ ಟ್ರಸ್ಟ್ (ರಿ) ಓರ್ತೋಪೆಡಿಕ್ ಸೈನ್ಸ್ ಸರ್ಜನ್ ಮತ್ತು ಸಹಾಯಕ ಪ್ರೊಫೆಸರ್ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡಾ. ದೇವಿಕ್.ಟಿ. ಶೆಟ್ಟಿ ಮಾತನಾಡಿ, ದಾದಿಯರ ಕಠಿಣ ಶ್ರಮ ಮತ್ತು ಸಮರ್ಪಣಾ ಮನೋಭಾವಕ್ಕೆ ಸಮಾಜ ಯಾವಾಗಲೂ ಕೃತಜ್ಞರಾಗಿರುತ್ತಾರೆ.ವೃತ್ತಿಯ ಬಗ್ಗೆ ಬದ್ಧತೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಈ ಉದ್ಯೋಗದಿಂದ ಸಾಧ್ಯ ಎಂದರು.
ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಚೇರ್ಮನ್ ತಾರನಾಥ ಶೆಟ್ಟಿ ಅವರು ಅತಿಥಿಗಳನ್ನು ಗೌರವಿಸಿ, ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಶುಭ ಹಾರೈಸಿದರು.
ಟ್ರಸ್ಟಿಗಳಾದ ಸುಜಿತ್ ಕುಮಾರ್ ಶೆಟ್ಟಿ, ಸುಜಾತ. ಟಿ ಶೆಟ್ಟಿ, ವೀಣಾ ಶೆಟ್ಟಿ, ಶ್ರದ್ಧಾ ಶೆಟ್ಟಿ, ಮತ್ತು ಚೇತನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಉಪಸ್ಥಿತರಿದ್ದರು.
ಆರಂಭದಲ್ಲಿ ಸಂಜನಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಾಂಶುಪಾಲೆ ವೆಲ್ಮೀರಾ ಡಯಾಸ್ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಪಟ್ಟಿಯನ್ನು ಪ್ರೀತಿಕಾ ವಾಚಿಸಿದರು.ಸೆರೆನಾ ಡಯಾಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಪವನ್ ಕುಮಾರ್ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.
















